1 ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)
ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.
ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.
ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.
ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.
ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.
ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.
ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.
ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದು ತಂದು ಅಮೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟು ಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು.
ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.