Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:10 - ಪರಿಶುದ್ದ ಬೈಬಲ್‌

10 ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಖಾಯ ಪ್ರಾಂತದಲ್ಲಿರುವ ಯಾರೂ ಈ ನನ್ನ ಹೊಗಳಿಕೆಯನ್ನು ನಿಲ್ಲಿಸಲಾರರು ಎಂದು ಕ್ರಿಸ್ತ ಯೇಸುವಿನ ಸತ್ಯ ನನ್ನಲ್ಲಿ ಇರುವ ನಿಶ್ಚಯದಿಂದ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾಜ್ಯಾ ಭುತ್ತುರ್ ಅಸಲ್ಲ್ಯಾ ಕ್ರಿಸ್ತಾಚ್ಯಾ ಖರೆಪಾನಾನ್ ಮಿಯಾ ಸಾಂಗ್ತಾ : ಸಗ್ಳ್ಯಾ ಅಖಾಯಿಯಾತ್ ಮಾಜೆ ಮೊಟೆಪಾನ್ ಬೊಲುಕ್ ಕೊನಾಚ್ಯಾನ್ಬಿ ಅಡ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:10
21 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.


ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆಂಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.


ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.


ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.


ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.


ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.


ಸಹಾಯ ಮಾಡಬೇಕೆಂಬ ಬಯಕೆಯು ನಿಮಗಿದೆಯೆಂದು ನನಗೆ ಗೊತ್ತಿದೆ. ಮಕೆದೋನಿಯದಲ್ಲಿ ಜನರಿಗೆ ನಿಮ್ಮ ಈ ವಿಷಯದಲ್ಲಿ ಹೆಮ್ಮೆಯಿಂದ ಹೇಳುತ್ತಲೇ ಇದ್ದೇನೆ. ಅಖಾಯದಲ್ಲಿರುವ ನೀವು ಕಳೆದ ವರ್ಷದಿಂದಲೂ ಕೊಡಲು ಸಿದ್ಧರಾಗಿದ್ದೀರೆಂದು ಅವರಿಗೆ ಹೇಳಿದೆನು. ನಿಮ್ಮಲ್ಲಿರುವ ಕೊಡಬೇಕೆಂಬ ಬಯಕೆಯು ಇಲ್ಲಿರುವ ಅನೇಕ ಜನರಲ್ಲಿ ಕೊಡಬೇಕೆಂಬ ಬಯಕೆಯನ್ನು ಉಂಟುಮಾಡಿದೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,


ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.


ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು