2 ಕೊರಿಂಥದವರಿಗೆ 11:13 - ಪರಿಶುದ್ದ ಬೈಬಲ್13 ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತಸ್ಲೆ ಸಗ್ಳೆ ಝುಟೆ ಅಪೊಸ್ತಲ್, ಕುಸ್ಡೆ ಪಾನಾಚೆ ಕಾಮ್ ಕರ್‍ತಲೆ ಅನಿ ಅಪ್ನಿ ಕ್ರಿಸ್ತಾಚಿ ಅಪೊಸ್ತಲಾ ಮನುನ್ ವೆಸ್ ಘಾಲುನ್ ಅಸಲ್ಲೆ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.