2 ಕೊರಿಂಥದವರಿಗೆ 11:15 - ಪರಿಶುದ್ದ ಬೈಬಲ್15 ಹೀಗಿರಲು ಸೈತಾನನ ಸೇವಕರು ತಾವು ಸರಿಯಾದ ಕೆಲಸವನ್ನು ಮಾಡುತ್ತಿರುವವರಂತೆ ನಟಿಸುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಆದರೆ ಅವರು ಮಾಡುತ್ತಿರುವ ಕೆಲಸಗಳ ಪ್ರತಿಫಲವಾಗಿ ಅವರಿಗೆ ಕೊನೆಯಲ್ಲಿ ದಂಡನೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸುವದಕ್ಕೆ ವೇಷಹಾಕಿಕೊಳ್ಳುವದು ದೊಡ್ಡದಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಸೆ ರ್‍ಹಾತಾನಾ, ತೆಚಿ ಸೆವಕಾಬಿ ನಿತಿವಂತ್ಪಾನಾಚ್ಯಾ ಸೆವಕಾಂಚೊ ವೆಸ್ ಘಾಲ್ತಾತ್ ಹೊಲ್ಯಾರ್ ಹ್ಯಾತುರ್ ಕಾಯ್ಬಿ ವಿಶೆಸ್ ನಾ. ಖರೆ ಕಾಮಾಂಚ್ಯಾ ಪರ್‍ಕಾರ್ ತೆಂಚೊ ಅಂತ್ ಬಿ ಹೊತಾ. ಅಧ್ಯಾಯವನ್ನು ನೋಡಿ |