Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:19 - ಪರಿಶುದ್ದ ಬೈಬಲ್‌

19 ನೀವು ಬುದ್ಧಿವಂತರಾಗಿರುವುದರಿಂದ ಬುದ್ಧಿಹೀನರ ವಿಷಯದಲ್ಲಿ ಸಂತೋಷದಿಂದ ತಾಳ್ಮೆಯಿಂದಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬುದ್ಧಿಹೀನರನ್ನು ಹರ್ಷದಿಂದ ಸಹಿಸಿಕೊಳ್ಳುತ್ತಿರುವ ಬುದ್ಧಿವಂತರು ನೀವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮಿ ಬುದ್ವಂತಾ ತಸೆ ಮನುನ್ ಬುದ್ದ್ ನಸಲ್ಲ್ಯಾಂಚ್ಯಾ ವರ್‍ತಿ ತುಮಿ ಕವ್ಡೆ ಸೊಸುನ್ ಘೆವ್ನ್ ಹಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:19
5 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.


ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.


ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು