Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:21 - ಪರಿಶುದ್ದ ಬೈಬಲ್‌

21 ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಸರ್ಕೆ ಚಲುಕ್ ಮಾಕಾ ಬಳ್ ನಾ ಮನುನ್ ಮಿಯಾ ವಳಕಲ್ಲ್ಯಾ ವೈನಾ ಮಾಕಾ ಲಜ್ಜಾ ಕರ್ಲ್ಯಾಬಿ ಪರ್ವಾ ನಾ. ಖರೆ ಕೊನ್ ಬಿ ಮಾನುಸ್ ಅಪ್ನಾಚಿ ಬಡಾಯ್ ಬೊಲುಕ್ ಫಿಡೆ ಯೆತಾ ಹೊಲ್ಯಾರ್, ಪಿಶ್ಯಾಚ್ಯಾ ಸಾರ್ಕೆ ಮಿಯಾ ಹೆ ಮನ್ತಾ ಅನಿ ಮಿಯಾಬಿ ಬಡಾಯ್ ಸಾಂಗುಕ್ ಫಿಡೆ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:21
8 ತಿಳಿವುಗಳ ಹೋಲಿಕೆ  

“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ.


ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.


ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.


ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು