Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:26 - ಪರಿಶುದ್ದ ಬೈಬಲ್‌

26 ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕವ್ಡ್ಯಾಕಿ ಮಾಜ್ಯಾ ಪ್ರವಾಸಾತ್ನಿ ಮಾಜ್ಯಾ ವರ್‍ತಿ ಯೆಲ್ಲೆ ಅಪಾಯ್ ಕವ್ಡೆ ಮನುನ್ ಮಿಯಾ ಸಾಂಗುಚೆ! ಪಾನಿ ಭರುನ್ ಯೆಲ್ಲೆ ಅಪಾಯ್, ಚೊರಾಂಚೆ ಅಪಾಯ್, ಮಾಜ್ಯಾಚ್ ದೆಸಾಚ್ಯಾ ಲೊಕಾನಿಕ್ನಾ ಅಪಾಯ್, ಡಂಗ್ಳಿಯಾತ್ನಿ ಅಪಾಯ್, ಸಮುಂದರಾತ್ ಅಪಾಯ್, ಘಾತ್ಕಿ ಭಾವಾ ಅನಿ ಭೆನಿಯಾಂಚೊ ಅಪಾಯ್, ಶಾರಾತ್ನಿ ಅಪಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:26
35 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,


ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ನಾನು ದಮಸ್ಕದಲ್ಲಿದ್ದಾಗ ರಾಜನಾದ ಅರೇತನ ಅಧೀನದಲ್ಲಿದ್ದ ರಾಜ್ಯಪಾಲನು ನನ್ನನ್ನು ಬಂಧಿಸಬೇಕೆಂದಿದ್ದನು. ಅವನು ಪಟ್ಟಣದ ಸುತ್ತಲೂ ಕಾವಲುಗಾರರನ್ನು ನಿಲ್ಲಿಸಿದನು.


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.


ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.


ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.


ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!


ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು