Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:27 - ಪರಿಶುದ್ದ ಬೈಬಲ್‌

27 ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತರಾಸಾನ್ ರಾಬುನ್ ಕವ್ಡಿಕಿ ರ್‍ಹಾತ್ ನಿಜ್ ನಸ್ತಾನಾ, ಭುಕೆನ್ ಅನಿ ಸೊಸೆನ್ ಲೈ ಉಪಾಸಾ ಕಾಡುನ್ ,ಥಂಡ್ ಸೊಸುನ್ ಘೆವ್ನ್, ಅನಿ ಕಾಂಬ್ರಾನ್ ನಸ್ತಾನಾ ಉಗ್ಡೊ ಪಡುನ್ ಮಿಯಾ ಕಸ್ಟ್ ಕಾಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:27
17 ತಿಳಿವುಗಳ ಹೋಲಿಕೆ  

ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.


ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು