Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:10 - ಪರಿಶುದ್ದ ಬೈಬಲ್‌

10 ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತರ್ ಕ್ರಿಸ್ತಾಸಾಟಿ ಮಾಜ್ಯಾ ಪರಿಸ್ಥಿತಿತ್ನಿ ಪರ್ವಾ ಕರಿನಸಲ್ಲ್ಯಾತ್ನಿ, ಕಸ್ಟಾತ್ನಿ, ತರಾಸಾತ್ನಿ ಅನಿ ಸಂಕಟಾತ್ನಿ ಮಿಯಾ ಕುಶ್ ಹೊವ್ನ್ ಹಾಂವ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಳನಸಲ್ಲ್ಯಾ ಸರ್ಕೊ ರಾತಾನಾ ಖರೆಚ್! ತಾಕ್ತಿನ್ ಭರಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:10
29 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.


ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.


ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು