Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:9 - ಪರಿಶುದ್ದ ಬೈಬಲ್‌

9 ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ಬಳನಸಲ್ಲೆ ಅನಿ ತುಮಿ ತಾಕ್ತಿಚೆ ರ್‍ಹಾಲ್ಯಾರ್‍ಬಿ ಅಮ್ಕಾ ಕುಶಿಚ್! ತುಮಿ ಸಂಪುರ್ನ್ ಹೊಲ್ಯಾರ್ ಫಿರೆ ಮನ್ತಲಿಚ್ ಮಾಜಿ ಮಾಗ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:9
21 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.


ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಹೊಗಳಿಕೊಳ್ಳಬೇಕಾದರೆ, ನನ್ನನ್ನು ಬಲಹೀನನೆಂದು ತೋರಿಸುವ ಸಂಗತಿಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು