Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:12 - ಪರಿಶುದ್ದ ಬೈಬಲ್‌

12 ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರಿಸ್ತನ ಸುವಾರ್ತೆಯನ್ನು ಸಾರುವದಕ್ಕಾಗಿ ನಾನು ತ್ರೋವಕ್ಕೆ ಬರಲು ಕರ್ತನ ಕೃಪೆಯಿಂದ ನನಗೆ ಒಳ್ಳೇ ಸಂದರ್ಭ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕ್ರಿಸ್ತಾಚಿ ಬರಿ ಖಬರ್ ಪರ್‍ಚಾರ್ ಕರುಕ್ ಮಿಯಾ ತ್ರೊವಾಸಾತ್ ಗೆಲ್ಲ್ಯಾ ತನ್ನಾ, ಥೈ ಕಾಮ್ ಸುರು ಕರುಕ್ ಧನಿಯಾನ್ ಮಾಕಾ ಬರೊ ಅವ್ಕಾಸ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:12
20 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಮುಸಿಯ ನಾಡನ್ನು ಹಾದು ನೇರವಾಗಿ ತ್ರೋವ ಪಟ್ಟಣಕ್ಕೆ ಬಂದರು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ನಾವೆಲ್ಲರೂ ಮೇಲಂತಸ್ತಿನ ಕೊಠಡಿಯೊಂದರಲ್ಲಿ ಸೇರಿ ಬಂದಿದ್ದೆವು. ಆ ಕೊಠಡಿಯಲ್ಲಿ ಅನೇಕ ದೀಪಗಳಿದ್ದವು.


ನಾವು ತ್ರೋವದಿಂದ ಹಡಗಿನಲ್ಲಿ ಹೊರಟು ಸಮೊಥ್ರ ದ್ವೀಪಕ್ಕೆ ಬಂದು ಮರುದಿನ ನೆಯಪೊಲಿಸ್ ಪಟ್ಟಣವನ್ನು ತಲುಪಿ,


ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.


ಸುವಾರ್ತೆಯನ್ನು ಬೋಧಿಸುವ ಜನರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸುವಾರ್ತೆಯನ್ನು ಬೋಧಿಸುವವರು ತಮಗೆ ಅಗತ್ಯವಾದುವುಗಳನ್ನು ಈ ಸೇವೆಯ ಮೂಲಕ ಪಡೆದುಕೊಳ್ಳಬೇಕೆಂದು ಪ್ರಭುವು ಆಜ್ಞಾಪಿಸಿದ್ದಾನೆ.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.


ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು.


ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.


ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು