Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:4 - ಪರಿಶುದ್ದ ಬೈಬಲ್‌

4 ನಾನು ಮೊದಲೊಮ್ಮೆ ನಿಮಗೆ ಬರೆದಾಗ, ನನ್ನ ಹೃದಯವು ಬಹಳ ಗಲಿಬಿಲಿಗೊಂಡಿತ್ತು ಮತ್ತು ದುಃಖಗೊಂಡಿತ್ತು. ನಾನು ಕಣ್ಣೀರಿಡುತ್ತಾ ನಿಮಗೆ ಬರೆದದ್ದು ನಿಮ್ಮನ್ನು ದುಃಖಗೊಳಿಸುವುದಕ್ಕಲ್ಲ, ನಿಮ್ಮನ್ನು ಎಷ್ಟು ಪ್ರೀತಿಸುತ್ತೇನೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಮನುನ್ ತರಾಸಾತ್ನಾ ಅನಿ ಮನಾಕ್ ಬೆಜಾರ್ ಹೊವ್ನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ತಿ ಚಿಟಿ ಮಿಯಾ ತುಮ್ಕಾ ಲಿವಲ್ಲೊ, ತುಮ್ಕಾ ದಾಕ್ವುಚೆ ಮನುನ್ ನ್ಹಯ್ ಖಾಲಿ ತುಮ್ಚೆ ವೈರ್ ಮಾಕಾ ಅಸಲ್ಲೊ ಪ್ರೆಮ್ ಕೆವ್ಡೊ ಮನುನ್ ದಾಕ್ವುನ್ ದಿವ್ಕ್ ಮಿಯಾ ಲಿವಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:4
12 ತಿಳಿವುಗಳ ಹೋಲಿಕೆ  

ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು