2 ಕೊರಿಂಥದವರಿಗೆ 3:1 - ಪರಿಶುದ್ದ ಬೈಬಲ್1 ನಾವು ನಮ್ಮ ವಿಷಯವಾಗಿ ಮತ್ತೆ ಹೊಗಳಿಕೊಳ್ಳಲು ಆರಂಭಿಸಿದ್ದೇವೆಯೇ? ಇತರ ಕೆಲವು ಜನರಿಗೆ ಬೇಕಾಗುವಂತೆ ನಿಮ್ಮ ಬಳಿಗೆ ಬರಲು ನನಗೆ ಯೋಗ್ಯತಾಪತ್ರಗಳನ್ನು ತೆಗೆದು ಕೊಳ್ಳಬೇಕಾಗಿದೆಯೋ? ಅಥವಾ ಬೇರೆಡೆಗೆ ಹೋಗುವಾಗ ನಿಮ್ಮಿಂದ ಯೋಗ್ಯತಾ ಪತ್ರಗಳನ್ನು ತೆಗೆದುಕೊಳ್ಳಬೇಕಾಗಿದೆಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವೇ ನಮ್ಮನ್ನು ತಿರಿಗಿ ಹೊಗಳಿಕೊಳ್ಳುವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿವ್ಮಿುಂದ ಪಡಕೊಳ್ಳಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಸೆ ಹೊಲ್ಯಾರ್ ಅಮಿ ಕಾಯ್ ಅನಿಬಿ ಅಮ್ಚೆಚ್ ಮೊಟೆಪಾನ್ ಬೊಲುಕ್ ಬಗುಲಾವ್ ಕಾಯ್? ತುಮ್ಕಾ ದಾಕ್ವುಕ್, ನಾಹೊಲ್ಯಾರ್ ತುಮ್ಚ್ಯಾಕ್ನಾ ಘೆವ್ಕ್ ಯೊಗ್ಯ್ ಮನುನ್ ದಾಕ್ವುತಲ್ಯಾ ಚಿಟಿಯಾಂಚಿ ದುಸ್ರ್ಯಾಕ್ನಿ ಗರಜ್ ಹಾಯ್, ತಸೆ ಅಮ್ಕಾಬಿ ಗರಜ್ ಹಾಯ್ ಕಾಯ್? ಅಧ್ಯಾಯವನ್ನು ನೋಡಿ |
ನಾವು ನಮ್ಮನ್ನು ನಿಮ್ಮ ಮುಂದೆ ಮತ್ತೊಮ್ಮೆ ನಿರೂಪಿಸಿಕೊಳ್ಳುತ್ತಿಲ್ಲ. ಆದರೆ ನಮ್ಮ ಬಗ್ಗೆ ನಿಮಗೆ ಹೇಳುತ್ತಿದ್ದೇವೆಯಷ್ಟೆ. ನೀವು ನಮ್ಮ ವಿಷಯದಲ್ಲಿ ಹೆಮ್ಮೆಪಡುವುದಕ್ಕೆ ನಿಮಗೆ ಕಾರಣಗಳನ್ನು ಕೊಡುತ್ತಿದ್ದೇವೆ. ಆಗ, ಕಣ್ಣಿಗೆ ಕಾಣುವ ಸಂಗತಿಗಳ ಬಗ್ಗೆ ಹೆಮ್ಮೆಪಡುವ ಜನರಿಗೆ ಕೊಡತಕ್ಕ ಉತ್ತರವು ನಿಮ್ಮಲಿರುವುದು. ಆ ಜನರು ಒಬ್ಬ ವ್ಯಕ್ತಿಯ ಹೃದಯದ ಸ್ಥಿತಿಯ ಬಗ್ಗೆ ಚಿಂತಿಸುವುದಿಲ್ಲ.
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.