Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:16 - ಪರಿಶುದ್ದ ಬೈಬಲ್‌

16 ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಧನಿಯಾ ಕಡೆ ಪರತಲ್ಲ್ಯಾ ತನ್ನಾ ತೆ ಧಾಪಲ್ಲೆ ಪಡುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:16
13 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋವನೊಡನೆ ಮಾತಾಡಲು ಆತನ ಸನ್ನಿಧಿಗೆ ಹೋದಾಗಲೆಲ್ಲಾ ಮೋಶೆಯು ಮುಸುಕನ್ನು ತೆಗೆದಿಡುತ್ತಿದ್ದನು. ಬಳಿಕ ಮೋಶೆ ಹೊರಗೆ ಬಂದು ಯೆಹೋವನು ಆಜ್ಞಾಪಿಸಿದ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸುತ್ತಿದ್ದನು.


ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.


ಆದರೆ ಎಲ್ಲಾ ಜನಾಂಗಗಳನ್ನು ಮತ್ತು ಜನರನ್ನು ಮುಚ್ಚುವ ಒಂದು ಮುಸುಕು ಇದೆ. ಆ ಮುಸುಕು ಯಾವದೆಂದರೆ ಮರಣ.


ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


ಆದರೆ ಇಂದಿಗೂ ಸಹ, ಮೋಶೆಯ ಧರ್ಮಶಾಸ್ತ್ರವನ್ನು ಓದುವಾಗ, ಅವರ ಮನಸ್ಸುಗಳ ಮೇಲೆ ಮುಸುಕು ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು