Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:18 - ಪರಿಶುದ್ದ ಬೈಬಲ್‌

18 ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊಂಡಾರ್ ಕಾಯ್ಬಿ ಧಾಪಿ ನಸ್ತಾನಾ ಧನಿಯಾಚಿ ಮಹಿಮಾ ದಾಕ್ವುನ್ ದಿತಲೆ ಅಮಿ ಹೊತಾಂವ್, ಅಶೆ ಅಮಿ ಧನಿಯಾಚ್ಯಾ ಮಹಿಮೆನ್ ಲೈ ಅನಿ ಲೈ ಹೊಳ್ ಹೊಳ್ತಾಂವ್ ಅನಿ ತೆಚ್ಯಾ ಸರ್ಕೆ ಹೊವ್ನ್ ರುಪ್ ಬದಲ್ತಾವ್. ಹೆ ಸಗ್ಳೆ ಆತ್ಮೊ ಹೊವ್ನ್ ಅಸಲ್ಲ್ಯಾ ಧನಿಯಾಚೆಚ್ ಕಾಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:18
24 ತಿಳಿವುಗಳ ಹೋಲಿಕೆ  

“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.


ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.


ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.


ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೋ ಅಲ್ಲಿ ಸ್ವತಂತ್ರವಿರುತ್ತದೆ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು