2 ಕೊರಿಂಥದವರಿಗೆ 3:2 - ಪರಿಶುದ್ದ ಬೈಬಲ್2 ಸ್ವತಃ ನೀವೇ ನಮಗೆ ಯೋಗ್ಯತಾಪತ್ರವಾಗಿದ್ದೀರಿ. ಆ ಪತ್ರಗಳು ನಮ್ಮ ಹೃದಯಗಳಲ್ಲಿ ಬರೆಯಲ್ಪಟ್ಟಿವೆ. ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವೇ ನಮ್ಮ ಯೋಗ್ಯತಾಪತ್ರ; ಅದು ನಮ್ಮ ಹೃದಯಗಳಲ್ಲೇ ಬರೆದದೆ; ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತುಮಿಚ್ ಅಮಿ ಯೊಗ್ಯ್ ಮನುನ್ ದಾಕ್ವುತಲ್ಯಾ ಚಿಟಿಯಾ. ತೆ ಅಮ್ಚ್ಯಾ ಮನಾತ್ನಿ ಲಿವಲ್ಲೆ ಹಾಯ್. ಸಗ್ಳ್ಯಾ ಲೊಕಾಕ್ನಿ ತೆ ತಪಾಸುನ್ ಬಗುಕ್ ಅನಿ ವಾಚ್ವುಕ್ ಹೊತಾ. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.