2 ಕೊರಿಂಥದವರಿಗೆ 3:7 - ಪರಿಶುದ್ದ ಬೈಬಲ್7 ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮರಾನ್ ಹಾನ್ತಲೊ ಖಾಯ್ದೊ ಗುಂಡ್ಯಾಂಚ್ಯಾ ಫಳಿ ವೈನಿ ಲಿವ್ನ್ ಹೊಲಾ, ಅನಿ ತೆ ದಿಲ್ಲ್ಯಾ ತನ್ನಾ ದೆವಾಚಿ ಮಹಿಮಾ ದಿಸ್ಲಿ, ಮೊಯ್ಜೆಚ್ಯಾ ತೊಂಡಾ ವೈಲೊ ಉಜ್ವೊಡ್ ಸೈತ್ ತರಾಸಾಚೊ ಹೊತ್ತೊ. ತೊ ಉಜ್ವೊಡ್ ಲೈ ಮೊಟೊ ಹೊತ್ತೊ. ತಸೆ ಮನುನ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಅಪ್ನಾಚ್ಯಾ ಡೊಳಾನಿ ತೆಕಾ ಬಗುಕ್ ಹೊವುಕ್ನಾ . ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.