2 ಕೊರಿಂಥದವರಿಗೆ 3:9 - ಪರಿಶುದ್ದ ಬೈಬಲ್9 ಇದರರ್ಥವೇನೆಂದರೆ: ಆ ಸೇವೆಯು (ಧರ್ಮಶಾಸ್ತ್ರ) ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿತು, ಆದರೆ ಅದು ಮಹಿಮೆಯನ್ನು ಹೊಂದಿತ್ತು. ಹೀಗಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಉಂಟುಮಾಡುವುದು ಎಷ್ಟೋ ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಪರಾಧನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಪ್ರಭಾವದಿಂದಿರಲಾಗಿ ನೀತಿಗೆ ಸಾಧನವಾಗಿರುವ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮ್ಚ್ಯಾ ವೈರ್ ಚುಕ್ ವಾವ್ತಲೆಚ್ ಯೆವ್ಡೆ ಪರ್‌ಜಳಾನ್ ಭರಲ್ಲೆ ರ್‍ಹಾಲ್ಯಾರ್, ಅಮ್ಕಾ ಪವಿತ್ರಪಾನ್ ದಿತಾ ತಿ ರಿತ್ ಕವ್ಡಿ ಜಾಸ್ತಿ ಪರ್‌ಜಳಾನ್ ಭರಲ್ಲಿ ಅಸಿಲ್. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.