Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:15 - ಪರಿಶುದ್ದ ಬೈಬಲ್‌

15 ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಬಗಾ ಹೆ ಸಗ್ಳೆ ತುಮ್ಚ್ಯಾ ಬರೆಪಾನಾ ಸಾಟ್ನಿ ಮನುನ್ ತಯಾರ್ ಕರಲ್ಲೆ ಹಾಯ್‍. ಅಶೆ ದೆವಾಚ್ಯಾ ಕುರ್ಪೆಚೊ ಪಾವ್ಸ್ ಲೈ ಅನಿ ಲೈ ಮಾನ್ಸಾಚ್ಯಾ ವರ್‍ತಿ ಉತರ್ತಾನಾ, ದೆವಾಚ್ಯಾ ಮಹಿಮೆಕ್ ಧನ್ಯವಾದ್ ಸುತ್ತಿಬಿ ಜಾಸ್ತಿ ಚಡುನ್ಗೆತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:15
21 ತಿಳಿವುಗಳ ಹೋಲಿಕೆ  

ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.


ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು