Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:17 - ಪರಿಶುದ್ದ ಬೈಬಲ್‌

17 ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ವರ್‍ತಿ ಯೆತಲೆ ಬಾರಿಕ್ ಅನಿ ತಾತ್ಕಾಲಿಕ್ ತರಾಸ್ ಅಮ್ಕಾ ಕಸ್ಲೊಬಿ ಮಾಪ್ ನಸಲ್ಲ್ಯಾ; ಸರಿನಾ ತಸ್ಲ್ಯಾ ಮಹಿಮೆಕ್ ತಯಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:17
33 ತಿಳಿವುಗಳ ಹೋಲಿಕೆ  

ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.


ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.


ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೋ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು