2 ಕೊರಿಂಥದವರಿಗೆ 4:18 - ಪರಿಶುದ್ದ ಬೈಬಲ್18 ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಡೊಳ್ಯಾಕ್ನಿ ದಿಸ್ತಲ್ಯಾ ಸಾಮಾನಾಂಚ್ಯಾ ವರ್‍ತಿ ಅಮ್ಚೆ ಧ್ಯಾನ್ ಮನ್ ಅಮಿ ಥೈಯ್ನಾವ್, ದಿಸಿನಸಲ್ಲ್ಯಾ ವರ್‍ತಿ ಥವ್ತಾವ್. .ಕಶ್ಶಾಕ್ ಮಟ್ಲ್ಯಾರ್ ಅಮ್ಕಾ ದಿಸ್ತಾ ತೆ ತಾತ್ಕಾಲಿಕ್, ಖರೆ ದಿಸಿನಸಲ್ಲೆ ಸದಾ ಸರ್ವತಾಕ್ ರ್‍ಹಾತಾ ತಸ್ಲೆ. ಅಧ್ಯಾಯವನ್ನು ನೋಡಿ |
ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.