Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:4 - ಪರಿಶುದ್ದ ಬೈಬಲ್‌

4 ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬರ್‍ಯಾ ಖಬ್ರೆಚೊ ಉಜ್ವೊಡ್ ತೆನಿ ಬಗುಚೆ ನ್ಹಯ್ ಮನುನ್ ಹ್ಯಾ ಜಗಾಚ್ಯಾ ಮೊಟ್ಯಾ ಮುಖಂಡಾನ್ ತೆಂಚಿ ವಿಶ್ವಾಸಾನ್ ನಸಲ್ಲಿ ಮನಾ ಕುಡ್ಡಿ ಕರುನ್ ಥವ್ಲ್ಯಾನಾಯ್, ತಸೆ ಹೊವ್ನ್ ದೆವಾಚೊಚ್ ರುಪ್ ಹೊವ್ನ್ ಅಸಲ್ಲ್ಯಾ ಕ್ರಿಸ್ತಾಚಿ ಮಹಿಮಾ ಬರ್‍ಯಾ ಖಬ್ರೆಚೊ ಪರ್‌ಜಳ್ ಪರ್‍ಚಾರ್ ಹೊಲ್ಲೆ ಬಗುಕ್ ತೆಂಚ್ಯಾನ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:4
42 ತಿಳಿವುಗಳ ಹೋಲಿಕೆ  

“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ಆದರೆ ಈ ಆಜ್ಞೆಯನ್ನು ನಾನು ನಿಮಗೆ ಹೊಸ ಆಜ್ಞೆಯೋ ಎಂಬಂತೆ ಬರೆಯುತ್ತಿದ್ದೇನೆ. ಈ ಆಜ್ಞೆಯು ಸತ್ಯವಾದದ್ದು. ಅದರ ಸತ್ಯತೆಯನ್ನು ನೀವು ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಕಾಣಬಹುದು. ಕತ್ತಲೆಯು ಕಳೆದುಹೋಗುತ್ತಿದೆ ಮತ್ತು ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ಲಯಗೊಂಡ ಆ ಸೇವೆಯು ಮಹಿಮೆಯೊಂದಿಗೆ ಬಂದಿರುವುದಾಗಿದ್ದರೆ, ಎಂದೆಂದಿಗೂ ಮುಂದುವರಿಯುವ ಈ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.


ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.


ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”


ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.


ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು