Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:5 - ಪರಿಶುದ್ದ ಬೈಬಲ್‌

5 ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮನ್ನೇ ಪ್ರಸಿದ್ಧಿಪಡಿಸಿಕೊಳ್ಳದೆ ನಮ್ಮನ್ನು ಯೇಸುವಿನ ನಿವಿುತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಪ್ರಸಿದ್ಧಿಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಪರ್‍ಚಾರ್ ಕರ್‍ತಲೆ; ಅಮ್ಚ್ಯಾಚ್ ವಿಶಯಾತ್ ನ್ಹಯ್, ಜೆಜು ಕ್ರಿಸ್ತುಚ್ ಅಮ್ಚೊ ಧನಿ ಮನುನ್ ಅಮಿ ಪರ್‍ಚಾರ್ ಕರ್ತಾವ್ ಅನಿ ಜೆಜುಸಾಟ್ನಿ ಅಮಿ ತುಮ್ಚಿ ಸೆವಕಾ ಮನುನ್ ಸಾಂಗಿತ್ ಜಾತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:5
39 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು