Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:11 - ಪರಿಶುದ್ದ ಬೈಬಲ್‌

11 ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಧನಿಯಾಚೆ ಭಿಂಯೆ ಮಟ್ಲ್ಯಾರ್ ಕಾಯ್ ಮನುನ್ ವಳ್ಕುನ್ ಘೆವ್ನ್; ಹೆಚ್ಯಾ ವಿಶಯಾತ್ ದುಸ್ರ್ಯಾಕ್ನಿ ಸಮ್ಜುನ್ ಸಾಂಗುಕ್ ಖಟ್ಪಟ್ ಕರ್ತಾಂವ್, ದೆವಾಕ್ ಅಮ್ಚಿ ಪುರಾ ವಳಕ್ ಹಾಯ್ ಅನಿ ಅಮಿ ಕಸ್ಲೆ ಮನ್ತಲಿ ಸಮ್ಜನ್ ತುಮ್ಚ್ಯಾಬಿ ಭುತ್ತುರ್‍ಲ್ಯಾ ಮನಾತ್ನಿ ತುಮ್ಕಾ ಗಾವ್ಲಾ ಮನುನ್ ಅಮ್ಚೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:11
39 ತಿಳಿವುಗಳ ಹೋಲಿಕೆ  

ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.


ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.


ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.


ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.


ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು