Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:18 - ಪರಿಶುದ್ದ ಬೈಬಲ್‌

18 ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆ ಸಗ್ಳೆ ದೆವಾಚೆ ಕಾಮ್. ತೆನಿಚ್ ಅಮ್ಕಾ ಕ್ರಿಸ್ತಾಚ್ಯಾ ವೈನಾ ಅಪ್ನಾಕ್ಡೆ ಎಕ್ ಕರುನ್ ಘೆಟ್ಲ್ಯಾನಾಯ್ ಅನಿ ದುಸ್ರ್ಯಾಕ್ನಿ ರಾಜಿ ಕರುಕ್ ಹಾನ್ತಲಿ ಜವಾಬ್ದಾರಿ ಅಮ್ಕಾ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:18
29 ತಿಳಿವುಗಳ ಹೋಲಿಕೆ  

ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.


ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.


ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು