Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:20 - ಪರಿಶುದ್ದ ಬೈಬಲ್‌

20 ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಶೆ ಹೊಲ್ಯಾರ್ ಅಮಿ ಕ್ರಿಸ್ತಾಚೆ ಪ್ರತಿನಿದಿ ; ಅಮ್ಚ್ಯಾ ವೈನಾ ದೆವ್ ತುಮ್ಕಾ ಬಲ್ವುತಾ. ತಶೆ ಮನುನ್ ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಚ್ಯಾಕ್ಡೆ ಮಾಗ್ತಾವ್, ದೆವಾಕ್ಡೆ ರಾಜಿ ಹೊವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:20
28 ತಿಳಿವುಗಳ ಹೋಲಿಕೆ  

ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.


“ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ.


ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.


ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ,


ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.


ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು