Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:21 - ಪರಿಶುದ್ದ ಬೈಬಲ್‌

21 ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಾಯ್ಬಿ ಪಾಪ್ ನಸಲ್ಲ್ಯಾಕ್ ದೆವಾನ್ ಅಮ್ಚ್ಯಾಸಾಟ್ನಿ ಪಾಪಾಚಿ ಬಲಿ ಕರುನ್ ದಿಲ್ಯಾನ್. ಅಶೆಚ್ ಅಮ್ಕಾ ತೆಚ್ಯಾ ವೈನಾ ದೆವಾಚೆ ನಿತಿವಂತ್ಪಾನ್ ಘೆಟಲ್ಲಿ ಲೊಕಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:21
30 ತಿಳಿವುಗಳ ಹೋಲಿಕೆ  

ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.


ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು