2 ಕೊರಿಂಥದವರಿಗೆ 6:1 - ಪರಿಶುದ್ದ ಬೈಬಲ್1 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚ್ಯಾ ಕಾಮಾತ್ ತೆಚೆ ವಾಂಗ್ಡಿ ಹೊವ್ನ್ ಹೊತ್ತೆ ಅಮಿ ತುಮ್ಕಾ ಅಶೆ ಸಾಂಗ್ತಾವ್; ದೆವಾಕ್ನಾ ತುಮಿ ಘೆಟಲ್ಲಿ ತಿ ಕುರ್ಪಾ ಫಾಯ್ದ್ಯಾಕ್ ಪಡಿನಸಲ್ಲ್ಯಾ ಸರ್ಕೆ ಕರುನ್ ಘೆವ್‍ನಕಾಶಿ. ಅಧ್ಯಾಯವನ್ನು ನೋಡಿ |
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.