Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:14 - ಪರಿಶುದ್ದ ಬೈಬಲ್‌

14 ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಕ್ರಿಸ್ತನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಾಗಬೇಡಿರಿ. ಧರ್ಮಕ್ಕೂ ಅಧರ್ಮಕ್ಕೂ ಜೊತೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಚ್ಯಾ ಬಾಳ್ವಿಚ್ಯಾ ಜುವಾಕ್ ವಿಶ್ವಾಸಾತ್ ನಸಲ್ಲ್ಯಾಂಚ್ಯಾ ವಾಂಗ್ಡಾ ಖಾಂಜೊ ದಿವ್ನಕಾಶಿ, ಬರ್‍ಯಾನ್ ಅನಿ ಖೊಟ್ಯಾನ್ ಎಕ್ ಜೊತ್ ಹೊವ್ನ್ ಕಶೆ ಜಾವ್ಕ್ ಹೊತಾ? ಉಜ್ವೊಡಾನ್ ಅನಿ ಕಾಳ್ಕಾನ್ ವಾಂಗ್ಡಾ ಕಶೆ ಜಿವನ್ ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:14
44 ತಿಳಿವುಗಳ ಹೋಲಿಕೆ  

ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


“ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.


ಲೈಂಗಿಕ ಪಾಪ ಮಾಡುವ ಜನರ ಸಹವಾಸ ಮಾಡಕೂಡದೆಂದು ನಾನು ನನ್ನ ಪತ್ರದಲ್ಲಿ ನಿಮಗೆ ಬರೆದಿದ್ದೆ.


ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.


ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು.


ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸ್ನೇಹಿತನಾಗಿದ್ದೇನೆ. ನಿನ್ನ ನಿಯಮಗಳಿಗೆ ವಿಧೇಯರಾಗುವ ಪ್ರತಿಯೊಬ್ಬರಿಗೂ ನಾನು ಸ್ನೇಹಿತನಾಗಿದ್ದೇನೆ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.


ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ


ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು