Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:16 - ಪರಿಶುದ್ದ ಬೈಬಲ್‌

16 ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಾಂಗಾ ಮಾಕಾ ದೆವಾಚ್ಯಾ ಗುಡಿಚ್ಯಾ ವಾಂಗ್ಡಾ ದುಸ್ರ್ಯಾ ಮುರ್ತಿಯಾಕ್ನಿ ಗೌರವ್ ದಿವ್ಕ್ ಹೊತಾ ಕಾಯ್? ಅಮಿಚ್ ಝಿತ್ತ್ಯಾ ದೆವಾಚೆ ಗುಡಿ! ಹೆಚ್ಯಾ ವಿಶಯಾತ್ ದೆವಾನುಚ್ ಸಾಂಗಲ್ಲೆ ಹಾಯ್, “ಮಿಂಯಾ ಮಾಜ್ಯಾ ಲೊಕಾಂಚ್ಯಾ ಮದ್ದಿ ರಾತಾ, ತೆಂಚ್ಯಾ ಭುತ್ತುರ್ ಮಿಯಾ ವಸ್ತಿ ಕರ್‍ತಾ, ಮಿಯಾ ತೆಂಚೊ ದೆವ್ ಹೊತಾ, ತೆನಿ ಮಾಜಿ ಲೊಕಾ ಹೊತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:16
60 ತಿಳಿವುಗಳ ಹೋಲಿಕೆ  

ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ನಾನು ಇಸ್ರೇಲರ ಮಧ್ಯದಲ್ಲಿ ವಾಸಿಸುವೆನು ಮತ್ತು ಅವರ ದೇವರಾಗಿರುವೆನು.


ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.


ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.


ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’”


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.


ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”


ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


“ಯೇಸುವೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದು ಹೇಳುವವನಲ್ಲಿ ದೇವರು ನೆಲೆಸಿದ್ದಾನೆ ಮತ್ತು ಅವನು ದೇವರಲ್ಲಿ ನೆಲೆಸಿದ್ದಾನೆ.


ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.


ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.”


ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


‘ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.


“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.


ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ.


ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು