2 ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”
2 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.
2 ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.
2 ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”
ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.
ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.