2 ಕೊರಿಂಥದವರಿಗೆ 6:4 - ಪರಿಶುದ್ದ ಬೈಬಲ್4 ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹೆಚ್ಯಾ ಬದ್ಲಾಕ್ ದೆವಾಚ್ಯಾ ಸೆವಕಾಂಚ್ಯಾ ಸಗ್ಳ್ಯಾ ವಾಟೆನ್ ಅಮಿ ಅಮ್ಕಾಚ್ ತರಾಸಾತ್ನಿ ದಿತಾಂವ್, ಸಂಕಟಾತ್, ಗರಜೆತ್ ಹೊತ್ತೆ ತನ್ನಾ, ಅಡ್ಚನಿತ್, ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.