2 ಕೊರಿಂಥದವರಿಗೆ 6:6 - ಪರಿಶುದ್ದ ಬೈಬಲ್6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಶೆಚ್ ನಿತಳ್ ಮನಾನಿ, ಶಾನ್ಪಾನಾನ್, ಲೈ ಸಂಬಾಳುನ್ ಅನಿ ದಯಾಳ್ ಸ್ವಭಾವಾನ್ ಅಮಿ ಕ್ರಿಸ್ತಾಚಿ ಸೆವಕಾ ಮನುನ್ ಪವಿತ್ರ್ ಆತ್ಮ್ಯಾ ವೈನಾ ಅಮ್ಚೊ ಖರೊ ಪ್ರೆಮ್ ದಾಕ್ವುನ್ ದಿಲಾಂವ್. ಅಧ್ಯಾಯವನ್ನು ನೋಡಿ |
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.