2 ಕೊರಿಂಥದವರಿಗೆ 6:8 - ಪರಿಶುದ್ದ ಬೈಬಲ್8 ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮರ್ಯಾದಿನ್ ನಾಹೊಲ್ಯಾರ್ ಅವ್ಮಾನ್ ಕರುನ್ ಘೆವ್ನ್; ನಾಹೊಲ್ಯಾರ್ ಹೊಗ್ಳುನ್ ಘೆವ್ನ್, ಅಮ್ಕಾ ಝುಟೆ ಮನುನ್ ಮನ್ತಾತ್, ಜಾಲ್ಯಾರ್ಬಿ ಅಮಿ ಖರೆ ಬೊಲ್ತಾಂವ್. ಅಧ್ಯಾಯವನ್ನು ನೋಡಿ |
ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.