2 ಕೊರಿಂಥದವರಿಗೆ 6:9 - ಪರಿಶುದ್ದ ಬೈಬಲ್9 ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ವಳಕ್ ನಸಲ್ಲ್ಯಾಂಚ್ಯಾ ಸಾರ್ಕೆ ಅಮ್ಕಾ ಕರ್‍ತ್ಯಾತ್, ಜಾಲ್ಯಾರ್ಬಿ ಅಮಿ ಸಗ್ಳ್ಯಾಕ್ನಿ ವಳ್ಕಿಚೆ, ಅಮಿ ಮರ್ನಾಚ್ಯಾ ಪರಿಸ್ಥಿತಿತ್ ಪಾವಲ್ಲೆ ಸರ್ಕೆ ದಿಸ್ತಾವ್, ಜಾಲ್ಯಾರ್ ಬಿ ಅಮಿ ಝಿತ್ತೆಚ್ ಹಾಂವ್, ಅಮ್ಕಾ ಮಾರುನ್ ಬಡ್ವುಲ್ಯಾನಾತ್ ಜಾಲ್ಯಾರ್ಬಿ ಅಮ್ಚೊ ಜಿವ್ ಕಾಡುನ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.