Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:12 - ಪರಿಶುದ್ದ ಬೈಬಲ್‌

12 ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನಿಮಗೆ ಬರೆದಾಗ ಅನ್ಯಾಯಮಾಡಿದವನಿಗೆ ದಂಡನೆಯೂ ಅನ್ಯಾಯಹೊಂದಿದವನಿಗೆ ನ್ಯಾಯವೂ ಆಗಬೇಕೆಂಬುವ ಕಾರಣದಿಂದ ಬರೆಯಲಿಲ್ಲ; ನಮಗೋಸ್ಕರ ನಿಮಗಿರುವ ಆಸಕ್ತಿಯು ದೇವರ ಮುಂದೆ ನಿಮಗೆ ವ್ಯಕ್ತವಾಗಬೇಕೆಂಬುವ ಉದ್ದೇಶದಿಂದಲೇ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಮನುನ್ ಮಿಯಾ ತುಮ್ಕಾ ಲಿವಲ್ಲಿ ಚಿಟಿ ಎಕ್ಲ್ಯಾನ್ ಅನ್ನ್ಯಾಯ್ ಕರ್‍ಲ್ಯಾನಾಯ್ ನಾಹೊಲ್ಯಾರ್ ದುಸ್ರ್ಯಾನ್ ಅನ್ನ್ಯಾಯ್ ಸೊಸ್ಲ್ಯಾನಾಯ್ ಮನುನ್ ದಾಕ್ವುನ್ ದಿತಲ್ಯಾ ಕಾರನಾನ್ ನ್ಹಯ್ ಮಾಕಾ ತುಮ್ಚ್ಯಾ ವರ್‍ತಿ ಹೊತ್ತೊ ಪ್ರೆಮ್ ಕವ್ಡೊ ಜಗ್ಗೊಳ್ಲೊ ಮನುನ್ ದೆವಾಚ್ಯಾ ಇದ್ರಾಕ್ ತುಮ್ಕಾ ಸಾಂಗ್ತಲ್ಯಾ ಉದ್ದೆಶಾನ್ ಮಿಯಾ ತೆ ಲಿವಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:12
8 ತಿಳಿವುಗಳ ಹೋಲಿಕೆ  

ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.


(ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)


ಹೀಗೆ ನಾನು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಎಲ್ಲಾ ಸಭೆಗಳ ಮೇಲೆ ನನಗಿರುವ ಚಿಂತೆಯೂ ಇವುಗಳಲ್ಲಿ ಒಂದು. ನಾನು ಪ್ರತಿನಿತ್ಯ ಅವುಗಳ ಬಗ್ಗೆ ಚಿಂತಿಸುತ್ತೇನೆ.


ನಾನು ನಿಮಗೆ ಭಾರವಾಗದಿರುವುದು ನಿಮ್ಮ ಮೇಲೆ ನನಗೆ ಪ್ರೀತಿಯಿಲ್ಲದಿರುವ ಕಾರಣದಿಂದಲೋ? ಇಲ್ಲ! ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತಿದೆ.


ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು