Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:4 - ಪರಿಶುದ್ದ ಬೈಬಲ್‌

4 ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ವರ್‍ತಿ ಮಾಕಾ ಪುರಾ ವಿಶ್ವಾಸ್ ಹಾಯ್ ಅನಿ ತುಮ್ಚ್ಯಾ ವಿಶಯಾತ್ ಲೈ ಅಭಿಮಾನ್ ಹಾಯ್. ಮಿಯಾ ಸಮಾಧಾನಾನ್ ಭರುನ್ ವೊತುಲಾ ಅನಿ ಕಸ್ಟಾ ಸಂಕಟಾಚ್ಯಾ ಮದ್ದಿಬಿ ಸಂತೊಸಾನ್ ಹುಡಿ ಮಾರುನ್ಗೆತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:4
27 ತಿಳಿವುಗಳ ಹೋಲಿಕೆ  

ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)


ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.


ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.


ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.


ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು