2 ಕೊರಿಂಥದವರಿಗೆ 7:6 - ಪರಿಶುದ್ದ ಬೈಬಲ್6 ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ಧೈರ್ ಚುಕಲ್ಲ್ಯಾಕ್ನಿ ಬಳ್ ದಿತಲ್ಯಾ ದೆವಾನ್, ತಿತಾಚ್ಯಾ ಯೆನ್ಯಾಚ್ಯಾ ವೈನಾ ಅಮ್ಕಾ ಸಮಾದಾನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.