7 ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.
7 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.
7 ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.
7 ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
7 ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.
ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.
ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.
ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.
ಅಂದರೆ ನಾವು ಹೊಂದಿರುವ ನಂಬಿಕೆಯಿಂದ ನಾವು ಒಬ್ಬರಿಗೊಬ್ಬರು ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮ ನಂಬಿಕೆ ನನಗೆ ಸಹಾಯ ಮಾಡುತ್ತದೆ ಮತ್ತು ನನ್ನ ನಂಬಿಕೆ ನಿಮಗೆ ಸಹಾಯ ಮಾಡುತ್ತದೆ.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.
ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.
ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.