2 ಕೊರಿಂಥದವರಿಗೆ 7:9 - ಪರಿಶುದ್ದ ಬೈಬಲ್9 ಈಗ ನಾನು ಸಂತೋಷವಾಗಿದ್ದೇನೆ. ನಿಮ್ಮನ್ನು ದುಃಖಿತರನ್ನಾಗಿ ಮಾಡಿದ್ದಕ್ಕಾಗಿ ನಾನು ದುಃಖಿಸುತ್ತಿಲ್ಲ. ಆದರೆ ನಿಮ್ಮ ದುಃಖವು ನಿಮ್ಮ ಹೃದಯಗಳಲ್ಲಿ ಪರಿವರ್ತನೆಯನ್ನು ಉಂಟುಮಾಡಿದ್ದರಿಂದ ನಾನು ಸಂತೋಷವಾಗಿದ್ದೇನೆ. ದೇವರ ಇಚ್ಫೆಗನುಸಾರವಾಗಿ ನೀವು ದುಃಖಿತರಾದಿರಿ. ಆದ್ದರಿಂದ ನಮ್ಮಿಂದ ನಿಮಗೆ ಯಾವ ರೀತಿಯಲ್ಲಿಯೂ ನೋವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಬೇರೆ ಮನಸ್ಸನ್ನು ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನವ್ಮಿುಂದ ಯಾವದರಲ್ಲಿಯೂ ನಷ್ಟಪಡಲಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಮಿಯಾ ಕುಶಿ ನಾವ್, ಖರೆ ತುಮ್ಚ್ಯಾ ಬೆಜಾರಾನ್ ತುಮ್ಚೆ ಜಿವನ್ ಬದಲ್ಲ್ಯಾನ್ ಮನುನ್ ಮಾಕಾ ಕುಶಿ. ತುಮ್ಕಾ ಗಾವಲ್ಲೊ ಬೆಜಾರ್ ದೆವಾಚ್ಯಾ ಇಚ್ಚಾ ಸರ್ಕೆಚ್ ಮನುನ್ ಹೊತಾ. ತಶೆ ಮನುನ್ ಅಮ್ಚ್ಯಾ ವೈನಾ ತುಮ್ಕಾ ಕಾಯ್ಬಿ ಲುಕ್ಷಾನ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.