Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:11 - ಪರಿಶುದ್ದ ಬೈಬಲ್‌

11 ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದ್ದರಿಂದ ಆರಂಭಿಸುವುದರಲ್ಲಿ ಎಷ್ಟು ಆಸಕ್ತರಾಗಿದ್ದಿರೋ, ಅಷ್ಟೇ ಆಸಕ್ತಿಯಿಂದ ನಿಮ್ಮ ನಿಮ್ಮ ಶಕ್ತಿಗನುಸಾರವಾಗಿ ನೀಡಿ ಈ ಯೋಜನೆಯನ್ನು ಪೂರೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಕಾರ್ಯವನ್ನು ಪ್ರಾರಂಭಿಸುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ಧಮನಸ್ಸು ಇತ್ತೋ ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನೀವು ಎಷ್ಟು ಆಸಕ್ತರಾಗಿ ಪ್ರಾರಂಭಿಸಿದ್ದೀರೋ, ಅಷ್ಟೇ ಆಸಕ್ತಿಯಿಂದ ಅದನ್ನು ಮುಗಿಸಿರಿ. ನಿಮ್ಮ ನಿಮ್ಮ ಶಕ್ತ್ಯಾನುಸಾರವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತರ್ ಅತ್ತಾ ತೆ ತುಮಿ ಪುರಾ ಕರಾ. ತೆ ಸುರು ಕರ್‍ತಾನಾ ತುಮಿ ಇಮೆಂದ್ ದಾಕ್ವುಲ್ಲ್ಯಾಶಿ ತಶೆಚ್ ತುಮ್ಚ್ಯಾ ತಾಕ್ತಿ ಪರ್‍ಕಾರ್ ತಿ ಪುರಾ ಕರುಕ್ ಇಮೆಂದ್ ದಾಕ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:11
5 ತಿಳಿವುಗಳ ಹೋಲಿಕೆ  

ಸಹಾಯ ಮಾಡಬೇಕೆಂಬ ಬಯಕೆಯು ನಿಮಗಿದೆಯೆಂದು ನನಗೆ ಗೊತ್ತಿದೆ. ಮಕೆದೋನಿಯದಲ್ಲಿ ಜನರಿಗೆ ನಿಮ್ಮ ಈ ವಿಷಯದಲ್ಲಿ ಹೆಮ್ಮೆಯಿಂದ ಹೇಳುತ್ತಲೇ ಇದ್ದೇನೆ. ಅಖಾಯದಲ್ಲಿರುವ ನೀವು ಕಳೆದ ವರ್ಷದಿಂದಲೂ ಕೊಡಲು ಸಿದ್ಧರಾಗಿದ್ದೀರೆಂದು ಅವರಿಗೆ ಹೇಳಿದೆನು. ನಿಮ್ಮಲ್ಲಿರುವ ಕೊಡಬೇಕೆಂಬ ಬಯಕೆಯು ಇಲ್ಲಿರುವ ಅನೇಕ ಜನರಲ್ಲಿ ಕೊಡಬೇಕೆಂಬ ಬಯಕೆಯನ್ನು ಉಂಟುಮಾಡಿದೆ.


“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.


ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು