Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:15 - ಪರಿಶುದ್ದ ಬೈಬಲ್‌

15 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 :ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪವಿತ್ರ ವೇದದಲ್ಲಿ ಬರೆದಿರುವಂತೆ: “ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್. “ಜಾಸ್ತಿ ಗೊಳಾ ಕರುನ್ ಥವಲ್ಲ್ಯಾಕ್ಡೆ ಕಾಯ್ಬಿ ಉರುಕ್ನಾ, ಅನಿ ಕಮಿ ಅಸಲ್ಲ್ಯಾಕ್ ಕಾಯ್ಬಿ ಕಮಿ ಹೊವ್ಕ್ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:15
3 ತಿಳಿವುಗಳ ಹೋಲಿಕೆ  

ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.


ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು