Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:16 - ಪರಿಶುದ್ದ ಬೈಬಲ್‌

16 ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾ ಬರೆಪಾನಾ ಸಾಟ್ನಿ ರಾಬುಕ್ ಮಾಕಾ ಹಾಯ್ ತಸ್ಲಿಚ್ ಇಮೆಂದ್ ತಿತಾಚ್ಯಾ ಮನಾತ್‍ ಘಾಟಲ್ಲ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್!.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:16
13 ತಿಳಿವುಗಳ ಹೋಲಿಕೆ  

ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.


ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.


ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.


ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.


ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು