2 ಕೊರಿಂಥದವರಿಗೆ 8:2 - ಪರಿಶುದ್ದ ಬೈಬಲ್2 ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆಂಚಿ ಪರಿಕ್ಷಾ ಕರುಕ್ ಮನುನ್ ಯೆಲ್ಲ್ಯಾ ಕಸ್ಟಾ ಸಂಕಟಾತ್ನಿ ತೆನಿ ದಾಕ್ವಲ್ಲಿ, ತಿ ಮೆಜುಕ್ ಹೊಯ್ನಾ ತವ್ಡಿ ಕುಶಿ, ತೆನಿ ಲೈ ಗರಿಬ್ ರ್‍ಹಾಲ್ಯಾರ್‍ಬಿ ತೆನಿ ದಿಲ್ಲೆ ದಾನ್, ಎಕ್ ಬದಿಕುಚ್ ಹೊವ್ಕ್ ಪಾವ್ಲಾ. ಅಧ್ಯಾಯವನ್ನು ನೋಡಿ |
ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.