2 ಕೊರಿಂಥದವರಿಗೆ 8:23 - ಪರಿಶುದ್ದ ಬೈಬಲ್23 ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಿತಾಚ್ಯಾ ವಿಶಯಾತ್ ಸಾಂಗುಚೆ ಹೊಲ್ಲ್ಯಾರ್, ತೊ ತುಮ್ಚಿ ಸೆವಾ ಕರ್‍ತಲ್ಯಾ ವಿಶಯಾತ್ ಮಾಜೊ ವಾಂಗ್ಡಿ ಅನಿ ಕಾಮ್ಗಾರಿ, ತೆಚ್ಯಾ ವಾಂಗ್ಡಾ ಜಾತಲ್ಯಾ ಭಾವಾಚ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ತೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚಿ ದುತಾ ಅನಿ ಕ್ರಿಸ್ತಾಚಿ ಮಹಿಮಾ. ಅಧ್ಯಾಯವನ್ನು ನೋಡಿ |
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.