Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:24 - ಪರಿಶುದ್ದ ಬೈಬಲ್‌

24 ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದಕಾರಣ ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನೂ ನಿಮ್ಮನ್ನು ನಾವು ಹೊಗಳಿದ್ದು ನ್ಯಾಯವೆಂಬದನ್ನೂ ಇವರಿಗೂ ಸಭೆಗಳಿಗೂ ತೋರಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಮನುನ್ ದೆವಾಚ್ಯಾ ಲೊಕಾಂಚ್ಯಾ ಇದ್ರಾಕ್ ತುಮ್ಚ್ಯಾ ಪ್ರೆಮಾಚೆ ಖರೆಪಾನ್ ದಾಕ್ವಾ, ಅನಿ ತುಮ್ಚ್ಯಾ ವಿಶಯಾತ್ ಮಿಯಾ ಬೊಲ್ತಾ ತೆ ಮೊಟೆಪಾನ್ ಸಮಾ ಮನುನ್ ದಾಕ್ವುನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:24
5 ತಿಳಿವುಗಳ ಹೋಲಿಕೆ  

ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.


ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.


ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು