2 ಕೊರಿಂಥದವರಿಗೆ 8:5 - ಪರಿಶುದ್ದ ಬೈಬಲ್5 ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಅಮಿ ಚಿಂತುಕ್ ಸೈತ್ ನಸಲ್ಲಾಂವ್ ತವ್ಡೆ ತೆನಿ ಕರ್‍ಲ್ಯಾನಿ. ಅದ್ದಿ ಅಪ್ನಾಕುಚ್ ದೆವಾಚ್ಯಾ ಚಾಕ್ರಿ ಕರ್‍ತಲ್ಯಾತ್ ತೆನಿ ಒಪ್ಸುನ್ ದಿಲ್ಯಾನಿ ಅನಿ ಮಾನಾ ದೆವಾಚ್ಯಾ ಇಚ್ಚ್ಯಾ ಪರ್ಕಾರ್ ಅಮ್ಚ್ಯಾ ಸೆವೆಕ್ ತೆನಿ ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”