2 ಕೊರಿಂಥದವರಿಗೆ 8:6 - ಪರಿಶುದ್ದ ಬೈಬಲ್6 ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಚೆಸಾಟ್ನಿ ತಿತಾನ್ ಪಯ್ಲೆಚ್ ತುಮ್ಚ್ಯಾ ಮದ್ದಿ ಸುರು ಕರಲ್ಲೆ ತೆ ದಾನ್ ಗೊಳಾ ಕರ್‍ತಲೆ ಕಾಮ್ ತೆನಿಚ್ ಜಾವ್ನ್ ಪುರಾ ಕರುಚೆ ಮನುನ್ ತೆಕಾ ಜಬರ್ದಸ್ತಿ ಕರ್‍ಲಾ. ಅಧ್ಯಾಯವನ್ನು ನೋಡಿ |