Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:12 - ಪರಿಶುದ್ದ ಬೈಬಲ್‌

12 ನೀವು ಮಾಡುವ ಈ ಸೇವಾಕಾರ್ಯದಿಂದ ಕೊರತೆಯಲ್ಲಿರುವ ದೇವಜನರಿಗೆ ಸಹಾಯವಾಗುವುದು. ಅಷ್ಟು ಮಾತ್ರವೇ ಅಲ್ಲ, ಇದರಿಂದಾಗಿ ದೇವರಿಗೆ ಹೆಚ್ಚುಹೆಚ್ಚಾಗಿ ಕೃತಜ್ಞತಾಸ್ತುತಿ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೇಗಂದರೆ ನೀವು ನಡಿಸುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗುವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಸ್ಲ್ಯಾ ಪ್ರೆಮಾಚ್ಯಾ ಸೆವೆಚ್ಯಾ ವೈನಾ ದೆವಾಚ್ಯಾ ಲೊಕಾಂಚ್ಯಾ ಗರ್ಜೆತ್ನಿ ಪಾವಲ್ಲ್ಯಾ ಸರ್ಕೆ ಹೊತಾ, ತವ್ಡೆಚ್ ನ್ಹಯ್ ಲೈ ಲೊಕಾನಿಕ್ನಾ ದೆವಾಕ್ ಧನ್ಯವಾದ್‍ಬಿ ಗಾವಲ್ಲ್ಯಾ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:12
10 ತಿಳಿವುಗಳ ಹೋಲಿಕೆ  

ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು