2 ಕೊರಿಂಥದವರಿಗೆ 9:7 - ಪರಿಶುದ್ದ ಬೈಬಲ್7 ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹರಿ ಎಕ್ಲೊ ಅಪ್ನಿ ಮನಾತ್ ನಿರ್ನಯ್ ಕರಲ್ಲ್ಯಾ ಪರ್‍ಕಾರ್ ದಿಂವ್ದಿತ್, ಪುರಾ ಸರ್ಕೆ ಕರುನ್ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ಹಾಸ್ಮುರ್ಕ್ಯಾ ತೊಂಡಾನ್ ದಿತಲೊ ದೆವಾಕ್ ಪ್ರೆಮಾಚೊ. ಅಧ್ಯಾಯವನ್ನು ನೋಡಿ |